This is the title of the web page
This is the title of the web page

Please assign a menu to the primary menu location under menu

Local News

ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಬೆಳಗಾವಿ, ಸೆ.೨೦: ೬ ರಿಂದ ೧೮ ವರ್ಷದ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮಾ” ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ರಕ್ಷಿಸಿದ ಘಟನೆಯು ೦೧-೦೮-೨೦೨೧ ರಿಂದ ೦೧-೦೭-೨೦೨೨ ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ, ೧೦,೦೦೦/- ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದು.೨೦೨೨-೨೩ ನೇ ಸಾಲಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಆಸಕ್ತಿವುಳ್ಳ ಬಾಲಕ/ಬಾಲಕಿಯರು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ಕಛೇರಿಯಲ್ಲಿ ಹಾಗೂ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳಲ್ಲಿ ಸಹ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: ೦೬-೧೦-೨೦೨೨ ನ್ನು ನಿಗದಿಪಡಿಸಲಾಗಿರುತ್ತದೆ. ತದನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ದೂರವಾಣಿ ಸಂಖ್ಯೆ: ೨೪೦೭೨೩೫ ಇಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply