This is the title of the web page
This is the title of the web page

Please assign a menu to the primary menu location under menu

State

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ


ಕೊಪ್ಪಳ ಆಗಸ್ಟ್ ೨೮ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ೨೦೨೩-೨೪ನೇ ಸಾಲಿಗಾಗಿ ೦೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು ಆಯ್ಕೆ ಕ್ಷೇತ್ರಗಳಿಗೆ ನೀಡುವ ಸಲುವಾಗಿ ನಾವೀಣ್ಯತೆ (ಇನ್ನೊವೇಷನ್) ತಾರ್ಕಿಕ (ಸ್ಕೊಲಾಸ್ಟಿಕ್) ಸಾಧನೆಗಳು, ಕಲೆ, ಸಾಂಸ್ಕೃತಿಕ & ಸಂಗೀತ, ಕ್ರೀಡೆ (ಸ್ಪೋರ್ಟ್ಸ್) ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು ೮ ಮಕ್ಕಳನ್ನು ಆಯ್ಕೆ ಮಾಡಿ ತಲಾ ೧೦,೦೦೦ ರೂ.ಗಳ ನಗದು ಒಳಗೊಂಡಿರುವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿ ಹಾಗೂ ಪ್ರಸ್ತಾವನೆಯನ್ನು ಸೆಪ್ಟೆಂಬರ್ ೦೭ ರೊಳಗೆ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply