This is the title of the web page
This is the title of the web page

Please assign a menu to the primary menu location under menu

Local News

ಕೃಷಿಕರಿಗೆ “ಕೃಷಿ ಪಂಡಿತ” ಪ್ರಶಸ್ತಿ: ಅರ್ಜಿ ಆಹ್ವಾನ


ಬೆಳಗಾವಿ,ಜುಲೈ: ಕೃಷಿಯಲ್ಲಿ ಸಾಧನೆ ಮಾಡಿದ ಅರ್ಹ ರೈತರಿಗೆ ಕೃಷಿ ಇಲಾಖೆಯು ೨೦೨೨-೨೩ ನೇ ಸಾಲಿನ “ಕೃಷಿ ಪಂಡಿತ” ಪ್ರಶಸ್ತಿ ನೀಡಲು ಅರ್ಜಿ ಆವ್ಹಾನಿಸಲಾಗಿದೆ.
ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗಾಗಿ “ಕೃಷಿ ಪಂಡಿತ” ಪ್ರಸಸ್ತಿಯನ್ನು ಈ ವರ್ಷದಿಂದ ನೀಡಲಾಗುತ್ತಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಸಂಶೋಧನೆಗಳು/ಸಾಧನೆಗಳು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಜುಲೈ ೨೨ ೨೦೨೨ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply