This is the title of the web page
This is the title of the web page

Please assign a menu to the primary menu location under menu

State

ಮೌಲಾನಾ ಆಜಾದ್ ಮಾದರಿ ಶಾಲಾ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, ಸೆ. ೨೦ : ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿಗಾಗಿ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ೦೬ ಭೋಧಕ ಹುದ್ದೆಗಳಿಗೆ ಅರ್ಹ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ಭೋದನೆಗಾಗಿ ಹಿಂದಿ ಭಾಷಾ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರನ್ನು ನೇಮಿಸಿಕೊಳ್ಳಲು ಇಲಾಖೆಯ ನಿರ್ದೇಶಕರು ಮಂಜೂರಾತಿ ನೀಡಿರುತ್ತಾರೆ. ಅದರಂತೆ ಜಿಲ್ಲೆಯ ಕೊಪ್ಪಳದ ಮೌಲಾನಾ ಆಜಾದ್ ಮಾದರಿ ಶಾಲೆ, ಯಲಬುರ್ಗಾ ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಗಂಗಾವತಿ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ತಲಾ ಒಂದು ಹಿಂದಿ ಮತ್ತು ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅರ್ಹರು ಸೆ. ೩೦ ರೊಳಗಾಗಿ ಆಯಾ ಶಾಲೆಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ಅತಿಥಿ ಶಿಕ್ಷಕರ ಸೇವೆಯೂ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುವವರಗೆ ಅಥವಾ ೨೦೨೨-೨೩ನೇ ಸಾಲಿನ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅಂದರೆ ಮಾರ್ಚ್-೨೦೨೩ ರವರೆಗೆ ಮಾತ್ರ ಸೀಮಿತವಾಗಿರುತ್ತದೆ. ಅತಿಥಿ ಶಿಕ್ಷಕರ ಸೇವೆ ತಾತ್ಕಾಲಿಕವಾಗಿ ಪಡೆಯಲಾಗಿದ್ದು, ಈ ಸೇವೆ ಖಾಯಂ ನೇಮಕಾತಿ ಅಥವಾ ಯಾವುದೇ ತರಹದ ಸೇವಾ ಕೃಪಾಂಕಕ್ಕೆ ಅರ್ಹವಾಗುವುದಿಲ್ಲ. ನೇಮಕಾತಿ ಅಧಿಸೂಚಿಸಿದ (ನೇರ ನೇಮಕಾತಿ) ಮಾದರಿ ಶಾಲೆ ಶಿಕ್ಷಕರು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾದ ತಕ್ಷಣ ಈ ಅತಿಥಿ ಶಿಕ್ಷಕರ ಹುದ್ದೆಗಳು ತಂತಾನೆ ರದ್ದಾಗುವುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply