ಗದಗ ಮೇ ೨೫: ಮುಂಡರಗಿ ತಾಲೂಕಿನ ಮುಂಡರಗಿ ಪಟ್ಟಣ ಪ್ರದೇಶ ಹಾಗೂ ಡಂಬಳ ಗ್ರಾಮೀಣ ಪ್ರದೇಶಗಳ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜೂನ್ ೨೨ ರೊಳಗೆ ಮುಂಡರಗಿ ತಹಶೀಲ್ದಾರ ಕಚೇರಿ ಇವರಲ್ಲಿ ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಯನ್ನು ಸಂಬಂಧಪಟ್ಟ ತಹಶೀಲ್ದಾರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ,ಗದಗ ಇವರ ಕಾರ್ಯಾಲಯದಿಂದ ಪಡೆಯಬಹುದಾಗಿದೆ.