This is the title of the web page
This is the title of the web page

Please assign a menu to the primary menu location under menu

State

ಸೇನೆ, ಯುನಿಫಾರ್ಮ್ ಸೇವೆಗೆ ಪೂರ್ವ ಸಿದ್ದತೆ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ ಜನವರಿ ೨೭ : ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ೨೦೨೨-೨೩ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೨-೨೩ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು (ಬಾಲಕರಿಗೆ ಮಾತ್ರ) ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಫೆಬ್ರವರಿ ೧೫ ಕೊನೆಯ ದಿನವಾಗಿದ್ದು, ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ಕ್ಕೆ ರೂ.೨.೫೦ ಲಕ್ಷಗಳು ಹಾಗೂ ಪ್ರವರ್ಗ-೨ಎ, ೩ಎ, ೩ಬಿ ಗಳಿಗೆ ರೂ ೧ ಲಕ್ಷಗಳಿರಬೇಕು. ಕನಿಷ್ಟ ವಿದ್ಯಾರ್ಹತೆ ಅಭ್ಯರ್ಥಿಯು ೧೦ನೇ ತರಗತಿಯನ್ನು ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ ೩೩ ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಈ ಸಮಾನವಾದ ಗ್ರೇಡ್ ಪಡೆದಿರಬೇಕು. ವಯೋಮಿತಿ ಡಿಸೆಂಬರ್ ೩೧,೨೦೨೩ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸು ೧೭.೫ ವರ್ಷದಿಂದ ೨೦ ವರ್ಷಗಳ ವಯಸ್ಸಿನ ಒಳಗಿರಬೇಕು (ಅಭ್ಯರ್ಥಿಯು ೦೧ ಡಿಸೆಂಬರ್ ೨೦೦೩ ರಿಂದ ೦೧ ಜುಲೈ ೨೦೦೬ ರ ದಿನಾಂಕಗಳ ನಡುವೆ ಜನಸಿರಬೇಕು.)
*ತರಬೇತಿ ನೀಡುವ ಸ್ಥಳಗಳು:* ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಪಡೆಯಬಹುದಾಗಿದೆ. ಅಥವಾ ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆ: ದೂ.ಸಂ. ೦೮೨೪-೨೨೨೫೦೭೮, ಉಡುಪಿ ಜಿಲ್ಲೆ: ದೂ.ಸಂ:೦೮೨೦-೨೫೭೪೮೮೧, ಉತ್ತರ ಕನ್ನಡ ಜಿಲ್ಲೆ :೦೮೩೮೨- ೨೨೬೫೮೯, ಕೇಂದ್ರ ಕಛೇರಿ: ೮೦೫೦೭೭೦೦೦೪ ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply