This is the title of the web page
This is the title of the web page

Please assign a menu to the primary menu location under menu

State

ನೋಂದಾಯಿತ ಮದರಸಾಗಳಿಗೆ ಅನುದಾನ ಬಿಡುಗಡೆ ಮಾಡಲು ಅರ್ಜಿ ಆಹ್ವಾನ


ಕೊಪ್ಪಳ, ಸೆ.೧೪ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿನ ಮದರಸಾಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ, ನೋಂದಾಯಿತ ಮದರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡುವ ಯೋಜನೆಯಡಿಯಲ್ಲಿ ಅರ್ಹ ಮದರಸಾಗಳಿಗೆ ಅನುದಾನ ಬಿಡುಗಡೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಿಸಿದ ಸಂಸ್ಥೆಗಳು ಆಯಾ ತಾಲೂಕಿನ ತಾಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಹೊಸಪೇಟ ರಸ್ತೆಯ ಮೌಲಾನಾ ಆಜಾದ್ ಭವನದಲ್ಲಿರುವ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಕಛೇರಿ ವೇಳೆಯಲ್ಲಿ ಅರ್ಜಿ ಪಡೆದು ಅಗತ್ಯದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವನ್ನು ಅಥವಾ ದೂರವಾಣಿ ಸಂಖ್ಯೆ: ೦೮೫೩೯-೨೨೫೦೭೦ ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಸುರೇಶ್ ಹೆಚ್ ಕೋಕರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply