This is the title of the web page
This is the title of the web page

Please assign a menu to the primary menu location under menu

Local News

ವಸತಿ ಶಾಲೆ: ಪ್ರವೇಶಕ್ಕೆ ಅರ್ಜಿ ಆಹ್ವಾನ


ಬೆಳಗಾವಿ,ಆ.೦೬: ೨೦೨೨-೨೩ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಇತರೆ ವಸತಿ ಶಾಲೆಗಳ ೬ನೇ ತರಗತಿ ದಾಖಲಾತಿಗಾಗಿ ಸಫಾಯಿ ಕರ್ಮಚಾರಿ ಮೀಸಲಾತಿ ಅಡಿಯಲ್ಲಿ, ೬ನೇ ತರಗತಿಯಲ್ಲಿ ಕಲಿಯುತ್ತಿರುವ ಸಫಾ¬`Ä ಕರ್ಮಚಾರಿ ಮಕ್ಕಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಕಡ್ಡಾಯವಾಗಿ ಸಫಾಯಿ ಕರ್ಮಚಾರಿ ಪ್ರಮಾಣ ಪತ್ರ ಪಡೆದು, ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿ, ಬೆಳಗಾವಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಛೇರಿ, ಬೆಳಗಾವಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಎಲ್ಲ ವಸತಿ ಶಾಲೆಗಳಲ್ಲಿ ಲಭ್ಯವಿರುತ್ತವೆ.
ಅರ್ಜಿ ನಮೂನೆ ಭರ್ತಿ ಮಾಡಿ ಸಫಾಯಿ ಕರ್ಮಚಾರಿ ಪ್ರಮಾಣ ಪತ್ರ ಹಾಗೂ ಇತರೆ ಅಗತ್ಯ ಶೈಕ್ಷಣಿಕ ದಾಖಲಾತಿಗಳೊಂದಿಗೆ ಜಿಲ್ಲೆಯ ಸಮೀಪದ ವಸತಿ ಶಾಲೆಗಳಿಗೆ ಖುದ್ದಾಗಿ ಆ ೧೨ರವರೆಗೆ ಸಾಯಂಕಾಲ ೫.೦೦ ಘಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಿಂದು ವರ್ಗಗಳ ಕಲಾಣ್ಯ ಇಲಾಖೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲಾಣ್ಯ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply