ಕೊಪ್ಪಳ ಆಗಸ್ಟ್ ೦೮ : ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ೨೦೨೩-೨೪ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸದಾಗಿ ಮೀನುಕೃಷಿ ಕೊಳಗಳ ನಿರ್ಮಾಣಕ್ಕೆ ಸಹಾಯ, ಮೀನುಕೃಷಿ ಕೊಳದ ಹೂಡಿಕೆ ವೆಚ್ಚಕ್ಕೆ ಸಹಾಯ, ಸಿಹಿನೀರು ಬಯೋಫ್ಲಾಕ್ ಘಟಕ ಸ್ಥಾಪನೆಗೆ ಸಹಾಯಧನ, ಮೀನು ಸಾಗಾಟಕ್ಕಾಗಿ ಇನ್ಸುಲೇಟೆಡ್ (ಶಾಖನಿರೋಧಕ) ವಾಹನ ಖರೀದಿಗೆ ಸಹಾಯಧನ ಮತ್ತು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನದಂತೆ ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.೪೦ ಹಾಗೂ ಪ.ಜಾತಿ, ಪ.ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.೬೦ ರಷ್ಟು ಸಹಾಯಧನ ನೀಡಲಾಗುತ್ತದೆ.
ಆಸಕ್ತ ಕುಷ್ಟಗಿ ತಾಲೂಕಿನ ಮೀನುಗಾರರು ಮತ್ತು ಸಾರ್ವಜನಿಕರು ಆಗಸ್ಟ್ ೨೨ರೊಳಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕುಷ್ಟಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಸಂಪರ್ಕಿಸಬಹುದು ಎಂದು ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಕುಷ್ಟಗಿ: ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕುಷ್ಟಗಿ: ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Suresh08/08/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023