This is the title of the web page
This is the title of the web page

Please assign a menu to the primary menu location under menu

State

ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ


ಕೊಪ್ಪಳ ಆಗಸ್ಟ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು, ನೋಂದಣೆ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.
ಅಭ್ಯರ್ಥಿಗಳು ೧೮ ವರ್ಷ ದಿಂದ ೪೦ ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಸೆಪ್ಟೆಂಬರ್ ೦೮ರ ಒಳಗಾಗಿ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ, ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಮೊಬೈಲ್ ಮುಖಾಂತರ ತಮ್ಮ ಹೆಸರುವನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ೬೩೬೨೫೫೭೩೩೨ ಅಥವಾ ೬೩೬೨೬೮೧೧೯೦ ಈ ನಂಬರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply