This is the title of the web page
This is the title of the web page

Please assign a menu to the primary menu location under menu

Local News

ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ


ಬೆಳಗಾವಿ,ಸೆ.೨೦: ಪ್ರಸಕ್ತ ೨೦೨೨-೨೩ ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ೦೮ ಯೋಜನೆಗಳಿಗೆ ಈಗಾಗಲೇ ಸುವಿಧಾ ತಂತ್ರಾಂಶದ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿರುತ್ತದೆ. ಪ್ರಸ್ತುತ ಸದರಿ ಯೋಜನೆಗಳಡಿ ಸೇವಾ ಸಿಂಧು ತಂತ್ರಾಂಶದ ಮೂಲಕ ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಅಂಧ ಮಹಿಳೆಯರ ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ವಿಕಲಚೇತನರಿಂದ ಆನ್‌ಲೈನ್ ಮೂಲಕ ಮರು ಅರ್ಜಿ ಆಹ್ವಾನಿಸಲಾಗಿರುತ್ತದೆ.
ಬೆಳಗಾವಿ ಜಿಲ್ಲೆಯ ವಿಕಲಚೇತನ ವ್ಯಕ್ತಿಗಳು ಸದರಿ ಯೋಜನೆಗಳಡಿ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿes ನ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: ೩೧-೧೦-೨೦೨೨ ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಸಲ್ಲಿಸಿದ ಹಾರ್ಡ ಪ್ರತಿಯೊಂದಿಗೆ ದ್ವಿ ಪ್ರತಿಯಲ್ಲಿ ಅರ್ಜಿಯನ್ನು ಆಯಾ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಲೂö್ಯ. ಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply