This is the title of the web page
This is the title of the web page

Please assign a menu to the primary menu location under menu

Local News

ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಬೆಳಗಾವಿ,ಅ.೧೫: ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಮತ್ತು ಅರಿವು ಸಾಲ ಯೋಜನೆ (ನವೀಕರಣ)ಗಳಡಿ ಪ್ರವರ್ಗ-೧ರ ೬(ಎಕೆ)ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ನೀರಾವರಿ ಯೋಜನೆ:- ಕನಿಷ್ಠ ೨ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿಸಣ್ಣ ರೈತರಾಗಿರಬೇಕು. ವಾರ್ಷಿಕ ವರಮಾನ ರ ೯೮,೦೦೦ ರೂ.ಗಳ ಮೀತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ ೧೮ ವರ್ಷಗಳು ಹಾಗೂ ಗರಿಷ್ಠ ೬೦ ವರ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ ೦೨ ಎಕರೆ ಜಮೀನು ಹೊಂದಿರಬೇಕು. ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ೨ ಲಕ್ಷ ರೂ.ಗಳ (ವಿದ್ಯುಧೀಕರಣ ಸೇರಿದಂತೆ) ಸಹಾಯಧನವನ್ನು ನಿಗಧಿಪಡಿಸಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ:- ಕರ್ನಾಟಕ ರಾಜ್ಯದಲ್ಲಿ ವೃತ್ತಿಪರ, ತಾಂತ್ರಿಕ ಇತ್ಯಾದಿ ಉನ್ನತ ಕೋರ್ಸಗಳ ವ್ಯಾಸಂಗಕ್ಕೆ ಪ್ರವೇಶ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ) ಸೀಟು ಪಡೆದು ಕಾಲೇಜಿಗೆ ಸೇರ್ಪಡೆಯಾದವರಿಗೆ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲದ ಮೊತ್ತಕ್ಕೆ ವಾರ್ಷಿಕ ಶೇ.೨ರ ಬಡ್ಡಿದರದಲ್ಲಿ ಅರ್ಹ ಫಲಾನುಭವಿಗಳಿಗೆ ಶೈಕ್ಷಣಿಕ ಸಾಲ ನೀಡಲಾಗುವುದು.
ಇರಬೇಕಾದ ಅರ್ಹತೆಗಳು : ವಿದ್ಯಾರ್ಥಿ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನವು ಎಲ್ಲಾ ಮೂಲಗಳಿಂದ ೩.೫ ಲಕ್ಷ ರೂ.ಗಳ ಮೀರಿರಬಾರದು. ವಿದ್ಯಾರ್ಥಿಯ ವಯಸ್ಸು ೩೫ ವರ್ಷ ಮೀರಿರಬಾರದು. ವಿದ್ಯಾರ್ಥಿಯು ಸರ್ಕಾರಿ ಕಾಲೇಜು/ಮಾನ್ಯತಿ ಪಡೆದ ಅನುದಾನಿತ ಮತ್ತು ಅನುದಾನರಹಿತ, ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ/ತಾಂತ್ರಿಕ/ಉನ್ನತ ವ್ಯಾಸಂಗದ ಕೋರ್ಸ್ಗಳಲ್ಲಿ ಸಿ.ಇ.ಟಿ. ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರಬೇಕು. ವಿದ್ಯಾರ್ಥಿಯು ಶೈಕ್ಷಣಿಕ ಉದ್ದೇಶಕ್ಕೆ ಇತರೆ ಯಾವುದೇ ಬ್ಯಾಂಕ್/ಆರ್ಥಿಕ ಸಂಸ್ಥೆಗಳಿಂದ ಸಾಲ ಪಡೆದಿರಬಾರದು.
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಈಗಾಗಲೇ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು ಉಳಿದ ೦೩ ಮತ್ತು ೦೪ ಕಂತುಗಳ ಸಾಲ ಬಿಡುಗಡೆಗಾಗಿ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು:-
ಅರ್ಜಿದಾರರು ಬೆಳಗಾವಿ ಜಿಲ್ಲೆಯ ನಿವಾಸಿಯಾಗಿರಬೇಕು. ಕೇಂದ್ರ ಆಧಾರ್ ಅಧಿನಿಯಮ, ೨೦೧೬ ಸೆಕ್ಷನ್ (೭)ರಡಿ ಆಧಾರ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆಯಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಸರ್ಕಾರ/ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ನಿಬಂಧನೆಗಳನ್ನು ಹೊಂದಿರಬೇಕು.
ವಿಶೇಷ ಸೂಚನೆ:-
ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು/ಸೌಲಭ್ಯವನ್ನು ಒದಗಿಸಲಾಗುವುದು. ಯೋಜನೆಯ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ, ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಗಳನ್ನು ಜಾರಿಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಯನ್ನು ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮ/ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬೆಳಗಾವಿ ಜಿಲ್ಲೆಯಿಂದ ಹಾಗೂ ವೆಬ್‌ಸೈಟ್ hಣಣಠಿ://ಚಿmbigಚಿಡಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆಯಬಹುದಾಗಿರುತ್ತದೆ. ನಿಗಮದ ಸಹಾಯವಾಣಿ (heಟಠಿಟiಟಿe) ಸಂಖ್ಯೆ ೦೮೩೧-೨೪೦೨೧೬೩ ಗೆ ಕಛೇರಿ ಸಮಯದಲ್ಲಿ ಬೆಳ್ಳಿಗೆ ೧೦ ರಿಂದ ಸಂಜೆ ೫:೩೦ ಗಂಟೆವರೆಗೆ ಸಂಪರ್ಕಿಸಬಹುದಾಗಿದೆ. ಅರ್ಜಿದಾರರು ಅರ್ಜಿಗಳನ್ನು ನವೆಂಬರ್ ೯, ೨೦೨೨ ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply