This is the title of the web page
This is the title of the web page

Please assign a menu to the primary menu location under menu

State

ಆರ್‌ಸೆಟ್ ಸಂಸ್ಥೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ


ಕೊಪ್ಪಳ, ಸೆ. ೧೬ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ (ರಿ), ಹಳಿಯಾಳದ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ೩೦ ದಿನಗಳ ಗೃಹೋಪಯೋಗಿ ಇಲೆಕ್ರಿಕಲ್ ಸಾಮಾನುಗಳ ದುರಸ್ತಿ ತರಬೇತಿ ಹಾಗೂ ೧೩ ದಿನಗಳ ಕೃಷಿ ಉದ್ಯಮಿ ಬಗ್ಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗೃಹೋಪಯೋಗಿ ಇಲೆಕ್ಟ್ರಿಕಲ್ ಸಾಮಾನುಗಳ ದುರಸ್ತಿ ತರಬೇತಿಯು ಇದೇ ಸೆಪ್ಟೆಂಬರ್ ೧೯ ರಿಂದ ಪ್ರಾರಂಭವಾಗುವುದು ಮತ್ತು ಕೃಷಿ ಉದ್ಯಮಿ ತರಬೇತಿ ಅಕ್ಟೋಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸದ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.
ತರಬೇತಿಯ ಸಮಯದಲ್ಲಿ ಊಟ, ವಸತಿ ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ, ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರಧಿ ತಯಾರಿಕೆ ಬಗೆಗಿನ ಮಾಹಿತಿಯನ್ನು ನೀಡಲಾಗವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೮೪-೨೯೫೩೦೭, ೨೨೦೮೦೭, ೯೪೮೩೪೮೫೪೮೯, ೯೪೮೨೧೮೮೭೮೦, ೮೧೯೭೦೨೨೫೦೧, ೯೭೪೨೪೩೮೭೯೦ ಗೆ ಸಂಪರ್ಕಿಸಬಹುದು ಎಂದು ಆರ್‌ಸೆಟಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply