ಗದಗ ಜನೆವರಿ ೭:ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (೩.೫ ಲಘು ಸರಕು ಸಾಗಾಣಿಕೆ ವಾಹನ) ಮತ್ತು ದ್ವಿ-ಚಕ್ರ ವಾಹನ ಯೋಜನೆ, ನೇರಸಾಲ ಯೋಜನೆ ಸೌಲಭ್ಯಕ್ಕಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu,ಞಚಿಡಿಟಿಚಿಣಚಿಞಚಿ.gov.iಟಿ ನ ಗ್ರಾಮ ಒನ್, ಕರ್ನಾಟಕ ಒನ್, ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್ ಮುಖಾಂತರ ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನೆವರಿ ೧೬ ಆಗಿದ್ದು ಅರ್ಜಿಯ ಪ್ರಿಂಟ ಪ್ರತಿಯನ್ನು ಹಾಗೂ ಅಪಲೋಡ ಮಾಡಿದ ದಾಖಲಾತಿಗಳನ್ನು ( ಜಾತಿ ಪ್ರಮಾಣ ಪತ್ರ, ಆದಾಯ ಪತ್ರ (ಚಾಲ್ತಿ), ರೇಶನ ಕಾರ್ಡ, ಆಧಾರ ಕಾರ್ಡ, ಫೋಟೋ- ೨, ದರಪಟ್ಟಿ (ಕೋಟೇಶನ್) ಯೋಜನಾ ವರದಿ ಹಾಗೂ ಬ್ಯಾಂಕ್ ಉಳಿತಾಯ ಖಾತೆ) ಜಿಲ್ಲಾ ಕಛೇರಿಗೆ ಸಲ್ಲಿಸುವುದು
ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಜಿಲ್ಲಾ ಆಡಳಿತ ಭವನ ನೆಲ ಮಹಡಿ ಕೊಠಡಿ ಸಂಖ್ಯೆ ೦೪, ಗದಗ ಜಿಲ್ಲಾ ಕಛೇರಿಯ ಸೂಚನಾ ಫಲಕದಲ್ಲಿ ನೋಡಬಹುದು. ದೂರವಾಣಿ ಸಂಖ್ಯೆ ೦೮೩೭೨-೨೩೯೫೫೭ ಸಂಪರ್ಕಿಸಬಹುದಾಗಿದೆ.
Gadi Kannadiga > State > ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ