ಗದಗ ಜನೆವರಿ ೩೦: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆಯಡಿಯಲ್ಲಿ ಕೊಳವೆ ಬಾವಿ ಸೌಲಭ್ಯ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೧ರ ೫೩(ಚಿ) ಯಿಂದ ೫೩( v)ವರೆಗಿನ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಠ ೨ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ವಾರ್ಷಿಕ ವರಮಾನ ಗ್ರಾಮೀಣ ರೂ. ೯೮,೦೦೦/- ಗಳ ಹಾಗೂ ನಗರ ಪ್ರದೇಶದವರಿಗೆ ರೂ. ೧,೨೦,೦೦೦/- ಗಳ ಮಿತಿಯಲ್ಲಿರಬೇಕು. ಆಧಾರ ಕಾರ್ಡ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು. ಚಾಲ್ತಿಯಲ್ಲಿರುವ ಆಧಾರ ಜೋಡಣೆಯಾದ ರಾಷ್ಟ್ರೀಕೃತ ಬ್ಯಾಂಕಿನ ಪಾಸಬುಕ್ ಪ್ರತಿಯನ್ನು ಒದಗಿಸಬೇಕು. ಅರ್ಜಿದಾರರು ತಮ್ಮ ೨(ಎರಡು) ಭಾವಚಿತ್ರಗಳನ್ನು ಲಗತ್ತಿಸಬೇಕು. ಒಂದು ಬಾರಿ ನಿಗಮದಿಂದ ಯಾವುದಾದರೂ ಯೋಜನೆಯಲ್ಲಿ ಸೌಲಭ್ಯ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾ ಸಿಂಧು ಪೋರ್ಟಲ್‌ನ ಮುಖಾಂತರ, ಗ್ರಾಮ ಓನ್, ಬೆಂಗಳೂರು ಓನ್ ಮತ್ತು ಕರ್ನಾಟಕ ಓನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೂ. ನಂ: ೨೦೨, ೨ನೇ ಮಹಡಿ, ಜಿಲ್ಲಾ ಆಡಳಿತ ಭವನ, ಗದಗ ಜಿಲ್ಲೆ ಅರ್ಜಿಗಳನ್ನು ಅಗತ್ಯ/ ದಾಖಲಾತಿಗಳೊಂದಿಗೆ ಮಾರ್ಚ ೨ ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ , ಗದಗ ಇವರನ್ನು ಸಂಪರ್ಕಿಸಬಹುದಾಗಿದೆ.
Gadi Kannadiga > State > ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023