ಕೊಪ್ಪಳ ಜನವರಿ ೧೦: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೋಲಿಗೆ ಯಂತ್ರ ವಿತರಣೆ ಯೊಜನೆಯಡಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ ೧, ೨ಎ, ೩ಎ, ಮತ್ತು ೩ಬಿ ಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ & ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿ ಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳನ್ನು ಹೊರತುಪಡಿಸಿ). ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮,೦೦೦ ಹಾಗೂ ನಗರ ಪ್ರದೇಶದವರಿಗೆ ೧,೨೦,೦೦೦ ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು.
ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳು), ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೋಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾ ಸಿಂಧು ಪೋರ್ಟಲ್‌ನ ಮುಖಾಂತರ, ಗ್ರಾಮ ಓನ್, ಬೆಂಗಳೂರು ಓನ್ ಮತ್ತು ಕರ್ನಾಟಕ ಓನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಫೆಬ್ರವರಿ ೨೦ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹಾಗೂ ನಿಗಮದ ವೆಬ್‌ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: ೦೮೦೨೨೩೭೪೮೩೨, ೮೦೫೦೭೭೦೦೦೪ ಮತ್ತು ೬೭೦೯೦೪೦೦೧೦೦/ ೭೦೯೦೪೦೦೯೦೦ ಹಾಗೂ ಕೊಪ್ಪಳ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: ೦೮೫೩೯-೨೨೧೮೪೭ ಸಂಪರ್ಕಿಸಬಹುದಾಗಿದೆ. ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023