This is the title of the web page
This is the title of the web page

Please assign a menu to the primary menu location under menu

Local News

ವಿದ್ಯಾರ್ಥಿ ವೇತನಕ್ಕಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ


ಬೆಳಗಾವಿ,ಜುಲೈ೨೧: ಪ್ರಸಕ್ತ ೨೦೨೨-೨೩ ನೇ ಸಾಲಿಗೆ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಫ್ ಯೋಜನೆಯಡಿ ಪ್ರೀಮ್ಯಾಟ್ರಿಕ್ (೯ನೇ ಮತ್ತು ೧೦ನೇ ತರಗತಿ ಮಾತ್ರ), ಪೋಸ್ಟ್ಮೆಟ್ರಿಕ್ ಹಾಗೂ ಟಾಪ್‌ಕ್ಲಾಸ್ ವಿಕಲಚೇತನ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ನೀಡಲಾಗುವ ವಿದ್ಯಾರ್ಥಿ ವೇತನಕ್ಕಾಗಿ ಇ-Sಛಿhoಟಚಿಡಿshiಠಿ Poಡಿಣಚಿಟ ದಲ್ಲಿ ಆನ್‌ಲೈನ ಅರ್ಜಿ ಆಹ್ವಾನಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ಸದರಿ ಯೋಜನೆಯ Websiಣe: ತಿತಿತಿ.sಛಿhoಟಚಿಡಿshiಠಿ.gov.iಟಿ ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಕಾಣಿಸಿದಂತೆ ಅಂತಿಮ ದಿನಾಂಕಗಳನ್ನು ನಿಗದಿಗೊಳಿಸಲಾಗಿರುತ್ತದೆ.
ಕಾರಣ ಬೆಳಗಾವಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನರು ಈ ಸೌಲಭ್ಯವನ್ನು ಪಡೆದು ಉನ್ನತ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.
ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಸೆಪ್ಟೆಂಬರ್ ೩೦, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಅಕ್ಟೋಬರ್ ೩೧, ಟಾಪ್‌ಕ್ಲಾಸ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಅಕ್ಟೋಬರ್೩೧ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ Websiಣe: ತಿತಿತಿ.ಜisಚಿbiಟiಣಥಿಚಿಜಿಜಿಚಿiಡಿs.gov.iಟಿನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply