ಬೆಳಗಾವಿ,ಅ.೨೧: ೨೦೨೨-೨೩ ನೇ ಸಾಲಿಗೆ ಬೆಳಗಾವಿ ಜಿಲ್ಲೆಯ ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ನವಂಬರ್ ೨ ರಿಂದ ನವಂಬರ್ ೩೦ ರ ವರೆಗೆ ಎರಡನೇ ತಂಡದಲ್ಲಿ ಔಟಿಟiಟಿe ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಹ ಅಭ್ಯರ್ಥಿಗಳು ಔಟಿಟiಟಿe ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪ್ರಿಂಟತೆಗೆದುಕೊಂಡುಅಗತ್ಯ ದಾಖಲಾತಿಗಳನ್ನು ಲಗತ್ತಿಟ್ಟುಜಂಟಿ ನಿರ್ದೇಶಕರಕಾರ್ಯಾಲಯ, ಸಮಾಜಕಲ್ಯಾಣ ಇಲಾಖೆ ೧ನೇ ಮಹಡಿ ನೆಹರುನಗರ ಬೆಳಗಾವಿ-೫೯೦೦೧೦ ಇವರಿಗೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ನವಂಬರ್ ೩೦ ಸಂಜೆ ೫ ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಇರುವ ಷರತ್ತು/ನಿಬಂಧನೆಗಳು : ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಹಾಗೂ ವಕೀಲ ವೃತ್ತಿ ನಡೆಸಲು ಅರ್ಹತೆಯುಳ್ಳ ಕಾನೂನು ಪದವೀಧರರು ಮಾತ್ರ ಈ ತರಬೇತಿಗೆ ಅರ್ಹರು.. ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು, ಮಹಿಳಾ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವದು. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು ೪೦ ವರ್ಷಗಳನ್ನು ಮೀರಿರಬಾರದು ಈ ಕುರಿತು ಅಧಿಕೃತ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ವರ್ಷಗಳ ತರಬೇತಿ ನೀಡಲಾಗುವುದು. ಹಾಗೂ ಮಾಹೆಯಾನ ೧೦೦೦೦ ಸಾವಿರ ತರಬೇತಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋಗಬಾರದು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಉದ್ಯೋಗ ದೊರೆತಲ್ಲಿ ಈ ನಿಬಂಧನೆ ಅನ್ವಯವಾ ಗುವದಿಲ್ಲ. ಅಪೂರ್ಣ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ ೨೦ ವರ್ಷಗಳಿಗಿಂತ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಅನುಭವವಿರುವ ಖಾಸಗಿ ಹಿರಿಯ ವಕೀಲರಲ್ಲಿ ತರಬೇತಿ ಪಡೆಯಲು ನಿಯೋಜಿಸಲಾ ಗುವುದು. ಆಯ್ಕೆಯಾದ ಅಭ್ಯರ್ಥಿಯು ಸರ್ಕಾರದ ಎಲ್ಲ ನಿಭಂದನೆಗೆ ಬಧ್ಧನಾಗಿರುತ್ತೇನೆ ಎಂದು ೨೦ ರೂ ಗಳ ಛಾಪಾಕಾಗದದ ಮೇಲೆ ಮುಚ್ಚಳಿಕೆೆಯನ್ನು ಆಯ್ಕೆ ಸಮಿತಿಯಿಂದ ಆಯ್ಕೆಯಾದ ನಂತರ ಬರೆದುಕೊಡತಕ್ಕದ್ದು.
ಆಯ್ಕೆಯಾದ ಅಭ್ಯರ್ಥಿಯು ಸುಳ್ಳು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಒದಗಿಸಿದಲ್ಲಿ ಶಿಕ್ಷೆಗೊಳಪಡುವುದಲ್ಲದೆ ಅವನು ಪಡೆದುಕೊಂಡ ತರಬೇತಿ ಭತ್ಯೆಯ ಪೂರ್ತಿ ಹಣವನ್ನು ವಾರ್ಷಿಕ ಶೇ. ೧೦ ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಒಂದು ವೇಳೆ ಬಾಕಿ ವಸೂಲಿ ಉಳಿದಲ್ಲಿ ಭೂಕಂದಾಯ ಬಾಕಿ ನಿಯಮಾವಳಿ ಅನ್ವಯ ವಸೂಲ ಮಾಡಲಾಗುವುದು. ಅಭ್ಯರ್ಥಿಗಳು ಔಟಿಟiಟಿeಮೂಲಕ ಅರ್ಜಿ ಸಲ್ಲಿಸಲು ತಾಂತ್ರಿಕ ಅಡಚಣೆಯಾದಲ್ಲಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸಮಾಜಕಲ್ಯಾಣ ಇಲಾಖೆ ೧ನೇ ಮಹಡಿ ನೆಹರುನಗರ ಬೆಳಗಾವಿ ಇಲ್ಲಿಕಛೇರಿ ನಡೆಯುವ ವೇಳೆ ಪಡೆಯಬಹುದಾಗಿದೆ. ಕಛೇರಿದೂರವಾಣಿ ಸಂಖ್ಯೆ೦೮೩೧-೨೪೦೭೨೪೫. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ದಿನಾಂಕವನ್ನು ಮತ್ತು ಸ್ಥಳವನ್ನು ತಿಳಿಸಲಾಗುವುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪಡೆದು ಅದರೊಂದಿಗೆ ಅವಶ್ಯಕ ಮಾಹಿತಿಗಳಾದ ಜಾತಿ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ, ಕಾನೂನು ಪದವಿ ಪರೀಕ್ಷೆ ದೃಢಿಕೃತ ಅಂಕಪಟ್ಟಿ ಮತ್ತು ಕಾನೂನು ಪದವಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ, (ಪಾಸೀಂಗ್ ಸರ್ಟಿಫಿಕೇಟ್) ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಬಾರ್ಕೌನ್ಸಿಲ್ದಲ್ಲಿ ಸದಸ್ಯತ್ವ ಪಡೆದ ಪ್ರಮಾಣ ಪತ್ರ ಮತ್ತು ಬಾರ್ ಅಸೋಶಿಯೇಶನದಲ್ಲಿ ಸದಸ್ಯತ್ವ ಪಡೆದ ಬಗ್ಗೆ ಪ್ರಮಾಣ ಪತ್ರ ಲಗತ್ತಿಸಬೇಕು. ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣ ತರಬೇತಿಗಾಗಿ ಎರಡನೇ ತಂಡದಲ್ಲಿ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧಿಕರಣ ತರಬೇತಿಗಾಗಿ ಎರಡನೇ ತಂಡದಲ್ಲಿ ಅರ್ಜಿ ಆಹ್ವಾನ
Suresh21/10/2022
posted on
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023