This is the title of the web page
This is the title of the web page

Please assign a menu to the primary menu location under menu

State

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ


ಬೆಳಗಾವಿ,ಸೆ.೧೪ : ೨೦೨೨-೨೩ ನೇ ಸಾಲಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷ ಅತ್ಯುತ್ತಮ ಸೇವೆ ಸಲ್ಲಿಸಿದ ಬೆಳಗಾವಿ ಜಿಲ್ಲೆಗೆ ಸಂಬಂದಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಾಜಿ ನಗರ ಬೆಳಗಾವಿ ಇವರಿಂದ ಪಡೆಯಬಹುದಾಗಿದೆ.
ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ೨೫೦೦೦ ರೂ. ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ೧ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರಾಧಾನ ಮಾಡಿ ಗೌರವಿಸುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೧-೨೪೦೭೨೩೫ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ ೨೦ ರ ಒಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲಾ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply