ಗದಗ ಜನೆವರಿ ೬: ನ್ಯಾಷನಲ್ ಟ್ರಸ್ಟ್ ಆ್ಯಕ್ಟ್-೧೯೯೯ರಡಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರಾಮಯ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ನೋಡಲ್ ಸಂಸ್ಥೆಯ ಆಯ್ಕೆಗಾಗಿ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ (ಬುದ್ಧಿಮಾಂದ್ಯ ಮಕ್ಕಳ ವಿಶೇಷ ಶಾಲೆ ನಡೆಸುತ್ತಿರುವ ಸಂಸ್ಥೆಗಳು) ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಸ್ವಯಂ ಸೇವಾ ಸಂಸ್ಥೆಯವರು ಜನೆವರಿ ೧೬ ರೊಳಗಾಗಿ ಪ್ರಸ್ತಾವನೆಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ: ೦೮೩೭೨-೨೨೦೪೧೯ಗೆ ಸಂಪರ್ಕಿಸಬಹುದಾಗಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಸಂಸ್ಥೆಗಳಿಂದ ಅರ್ಜಿ ಆಹ್ವಾನ