ಬೆಳಗಾವಿ, ಜ.೦೬ : ಅಂತರಾಷ್ಟ್ರೀಯ ಮಹಿಳಾ ದಿನಚರಣೆಯಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಕಳೆದ ೫ ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಗೆ ಹಾಗೂ ಇತರೆ ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಶಿಕ್ಷಣ, ಕ್ರೀಡೆ, ಸಾಹಿತ್ಯ ಹಾಗೂ ಕಲಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ ಮಹಿಳೆಯರಿಗಾಗಿ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಸದರಿ ಪ್ರಶಸ್ತಿಗಾಗಿ ಅರ್ಹ ಸ್ವಯಂ ಸೇವಾ ಸಂಸ್ಥೆ ಹಾಗೂ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಲಾಗಿದೆ.
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಾಜಿ ನಗರ ಬೆಳಗಾವಿ ಇವರಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ ೧೦, ೨೦೨೩ರರೊಳಗೆ ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ಗ್ರಾಮೀಣ ಇಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. ೦೮೩೧- ೨೪೭೬೨೦೯ ಗೆ ಸಂಪರ್ಕಿಸಬಹುದು. ನಿಗದಿತ ಅವಧಿಯ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಳಗಾವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಹಿಳೆಯರಿಂದ ಅರ್ಜಿ ಆಹ್ವಾನ
ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಹಿಳೆಯರಿಂದ ಅರ್ಜಿ ಆಹ್ವಾನ
Suresh06/01/2023
posted on