ಕೊಪ್ಪಳ ಸೆಪ್ಟೆಂಬರ್ ೧೨ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ಇಲಾಖೆಯಿಂದ ಟಾಕಿಂಗ್ ಲ್ಯಾಪ್‌ಟಾಪ್, ಬ್ರೆöÊಲ್‌ಕಿಟ್, ಹೊಲಿಗೆಯಂತ್ರ, ಸಾಧನ ಸಲಕರಣೆ ಹಾಗೂ ಶುಲ್ಕ ಮರುಪಾವತಿ ಯೋಜನೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಹಾಗೂ ನಂತರದ ತರಗತಿಗಳಲ್ಲಿ ಓದುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಮತ್ತು ಬ್ರೆöÊಲ್‌ಕಿಟ್, ಶ್ರವಣದೋಷವುಳ್ಳ ವಿಕಲಚೇತನರಿಗೆ ಹೊಲಿಗೆಯಂತ್ರ, ಎಸ್.ಎಸ್.ಎಲ್.ಸಿ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಹಾಗೂ ವಿಕಲಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳಿಗೆ ಸೌಲಭ್ಯ ಒದಗಿಸಲಾಗುತ್ತಿದೆ.
ಆಸಕ್ತರ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ ೩೧,೩೨ ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ ಕೊಪ್ಪಳ ಇವರಿಗೆ ಸೆಪ್ಟೆಂಬರ್ ೨೨ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೊನೆಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಎಂ.ಆರ್.ಡಬ್ಲೂö್ಯ.ಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: ೯೯೮೦೧೨೬೩೯೧, ಯಲಬುರ್ಗಾದ ಬಸನಗೌಡ ಮೊ.ಸಂ: ೯೯೬೪೮೦೩೦೪೭, ಕುಷ್ಟಗಿಯ ಚಂದ್ರಶೇಕರ ಮೊ.ಸಂ: ೯೯೧೬೩೦೮೫೮೫, ಗಂಗಾವತಿಯ ಮಂಜುಳಾ ಮೊ.ಸಂ: ೭೯೭೫೩೯೮೨೦೨ ಹಾಗೂ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ ೦೮೫೩೯-೨೦೦೪೬೦ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕ¯ರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ವಿಕಲಚೇತನರಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ವಿಕಲಚೇತನರಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
Suresh12/09/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023