ಗದಗ ಎಪ್ರಿಲ್ ೨೪: ಸರ್ಕಾರದ ಆದೇಶದಂತೆ ಶ್ರೀ ಭಗೀರಥ ಜಯಂತಿಯನ್ನು ಎಪ್ರಿಲ್ ೨೭ ರಂದು ಆಚರಿಸಬೇಕಾಗಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಎಪ್ರಿಲ್ ೨೭ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸರಳ ಹಾಗೂ ಸಾಂಕೇತಿಕವಾಗಿ ಅಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.