ಮೂಡಲಗಿ: ಅರಭಾವಿ ವಿಧಾನಸಭಾ ಮತಕ್ಷೇತ್ರದ ಚುನಾವಣೆ ಫಲಿತಾಂಶವನ್ನು ನಾನು ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇನೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಅರಭಾವಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಹಾಗೂ ನನಗೆ ಮತ ನೀಡಿರುವ ಎಲ್ಲ ಮತದಾರರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅರಭಾವಿಯಲ್ಲಿ ಸೋತರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸುತ್ತಿರುವದು ಸಂತೋಷದ ವಿಷಯ. ಪಕ್ಷದ ಗೆಲುವಿನ ರೂವಾರಿಗಳಾದ ರಾಹುಲ ಗಾಂಧಿಯವರು, ಸಿದ್ದರಾಮಯ್ಯನವರು, ಡಿ.ಕೆ. ಶಿವಕುಮಾರರವರು, ಮಲ್ಲಿಕಾರ್ಜುನ ಖರ್ಗೆಯವರು, ಸತೀಶ ಜಾರಕಿಹೊಳಿಯವರು ಮುಂತಾದ ನಾಯಕರಿಗೆ ಹಾರ್ದಿಕ ಅಭಿನಂದನೆಗಳು. ಕಾಂಗ್ರೆಸ್ ಸರ್ಕಾರ ತನ್ನ ಮೊದಲನೇ ಕ್ಯಾಬಿನೆಟ್ ಸಭೆಯಲ್ಲೇ ತಾನು ಮತದಾರರಿಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದ್ದು ಅರಭಾವಿಯ ಎಲ್ಲ ಮತದಾರರಿಗೂ ಅವುಗಳ ಪ್ರಯೋಜನ ವಿಸ್ತರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಮತ್ತು ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಅವಶ್ಯಕ ರಕ್ಷಣೆ, ಸಹಾಯ ಮತ್ತು ಸಹಕಾರ ನೀಡಲಾಗುವುದು ಎಂದು ಅರವಿಂದ ದಳವಾಯಿ ತಿಳಿಸಿದ್ದಾರೆ.
Gadi Kannadiga > Local News > ಫಲಿತಾಂಶವನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇನೆ: ಅರವಿಂದ ದಳವಾಯಿ
ಫಲಿತಾಂಶವನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇನೆ: ಅರವಿಂದ ದಳವಾಯಿ
Suresh15/05/2023
posted on
