ಗದಗ ಮೇ ೦೩ : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ರ ಅಂಗವಾಗಿ ಚುನಾವಣಾ ಆಯೋಗವು ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ.
ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ ೨೦೨೩ರ ಮತದಾನ ಮೇ ೧೦ ರಂದು £ಗದಿಯಾಗಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು ‘ಪುಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-೨೦೨೩ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ£ವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆ-೨೦೧೯ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ £ಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪಮಾಣ ಪತ್ರ ಹಾಗೂ ನಗದು ಬಹುಮಾನವನ್ನು £Ãಡಲಾಗುತ್ತಿದೆ.
*ಬಹುಮಾನಗಳ ವಿವರ:* ಪಥಮ ಬಹುಮಾನ ೨೫,೦೦೦ ರೂ., ದ್ವಿತೀಯ ಬಹುಮಾನ ೧೫,೦೦೦ ರೂ., ತೃತೀಯ ಬಹುಮಾನ ೧೦,೦೦೦ ರೂ., ಸಮಾಧಾನಕರ ಬಹುಮಾನ ೬,೦೦೦ ರೂ ಹಾಗೂ ವಿಶೇಷ ಬಹುಮಾನ ೫,೦೦೦ ರೂ.ಗಳನ್ನು £Ãಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ ೫ ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜ£ಕ ಸಂಪರ್ಕ ಇಲಾಖೆ £Ãಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ £Ãಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೋಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : ಞಣಞಛಿeomeಜiಚಿ೨೦೨೩gmಚಿiಟ.ಛಿom ಗೆ ಮೇ ೨೦ರ ಶ£ವಾರ ಸಂಜೆ ೫ ಗಂಟೆಯೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > *ವಿಧಾನಸಭೆ ಚುನಾವಣೆ: ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ*
*ವಿಧಾನಸಭೆ ಚುನಾವಣೆ: ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ*
Suresh03/05/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023