ಗದಗ ಜನೆವರಿ ೨೧: ಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯಲ್ಲಿ ಬೀದಿ ದನಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದಾಗಿ ನಗರಸಭೆ ಕಾರ್ಯಲಯಕ್ಕೆ ಸಾಕಷ್ಟು ಸಾರ್ವಜನಿಕ ದೂರುಗಳು ಸ್ವೀಕೃತವಾಗಿವೆ. ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿ ಸದರ ಬೀದಿ ದನಗಳನ್ನು ಹಿಡಿದು ಶ್ರೀ ಶಿವಯೋಗಿ ಮಂದಿರದ ಪಶುಪಾಲನಾ ಕೇಂದ್ರ ಇಲ್ಲಿ ಸ್ಥಳಾಂತರಿಸಲು ತೀರ್ಮಾನಿಸಿ ಠರಾವು ಪಾಸು ಮಾಡಲಾಗಿದೆ. ಗದಗ-ಬೆಟಗೇರಿ ನಗರಸಭೆ ವತಿಯಿಂದ ಟೆಂಡರ್ ಕರೆದು ಸದರಿ ಬೀದಿ ದನಗಳನ್ನು ಹಿಡಿದು ಸ್ಥಳಾಂತರಿಸಲು ತಿರ್ಮಾನಿಸಲಾಗಿದೆ. ಒಂದು ವೇಳೆ ದನಗಳ ಮಾಲೀಕರು ತಮ್ಮ ದನಗಳನ್ನು ಬೀದಿಯಲ್ಲಿ ಬಿಟ್ಟ ಪಕ್ಷದಲ್ಲಿ ಸದರಿ ದನಗಳನ್ನು ಜನೆವರಿ ೨೬ ರೊಳಗಾಗಿ ತಮ್ಮ ತಾಬಾಕ್ಕೆ ತೆಗೆದುಕೊಳ್ಳತಕ್ಕದ್ದು . ಇಲ್ಲದಿದ್ದಲ್ಲಿ ಗದಗ-ಬೆಟಗೇರಿ ನಗರಸಭೆ ಜವಾಬ್ದಾರಿಯಾಗುವುದಿಲ್ಲ ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ದನಗಳ ಮಾಲೀಕರ ಗಮನಕ್ಕೆ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023