ಗದಗ ಜು.೨೨: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ ೨೦೨೩” ಹಾಗೂ ಆಯಾ ಗ್ರಾಮದ ಖಾಸಗಿ ನಿವಾಸಿಗಳಿಗೆ “ಮುಂಗಾರು ಬೆಳೆ ಸಮೀಕ್ಷೆ ೨೦೨೩-೨೪” ನ್ನು ಆoತಿಟಿಟoಚಿಜ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.
ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ಬೆಳೆ ಸಮೀಕ್ಷೆ ಕಡ್ಡಾಯವಾಗಿರುವುದರಿಂದ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ. ರೈತರು ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ದಿನಾಂಕ ೨೫-೦೭-೨೦೨೩ ರೊಳಗಾಗಿ ವಿವರಗಳನ್ನು ದಾಖಲಿಸಬೇಕು ಎಂದು ಶ್ರೀಮತಿ ತಾರಾಮಣಿ ಜಿ.ಹೆಚ್. ಜಂಟಿ ಕೃಷಿ ನಿರ್ದೇಶಕರು, ಗದಗ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆಗೆ ೮೪೪೮೪೪೭೭೧೫ ಕರೆ ಮಾಡಲು ಕೋರಿದೆ.
Gadi Kannadiga > State > ರೈತ ಬಾಂಧವರ ಗಮನಕ್ಕೆ
ರೈತ ಬಾಂಧವರ ಗಮನಕ್ಕೆ
Suresh22/07/2023
posted on