This is the title of the web page
This is the title of the web page

Please assign a menu to the primary menu location under menu

State

ಸ್ವಚ್ಛ ಭಾರತ್ ದಿವಸ್ ಕಾರ್ಯಕ್ರಮ ಉತ್ತಮ ಕಾರ್ಯನಿರ್ವಹಣೆಗೆ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಪ್ರಶಸ್ತಿ ಪ್ರದಾನ


ಗದಗ ಸೆಪ್ಟೆಂಬರ್ ೨೨: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯವು ಸ್ವಚ್ಛ ಭಾರತ ಮಿಷನ್ ಯೋಜನೆಯ ೮ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಅಕ್ಟೋಬರ್ ೨ರಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನದಂದು ಸ್ವಚ್ಛ ಭಾರತ್ ದಿವಸ್ ಕಾರ್ಯಕ್ರಮವನ್ನು ಘನತೆವೆತ್ತ ರಾಷ್ಟ್ರಪತಿಗಳ ಅದ್ಯಕ್ಷತೆಯಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಘಟಕಾಂಶಗಳಲ್ಲಿ ಉತ್ತಮವಾಗಿ ಅನುಷ್ಟಾನ ಮಾಡಿರುವ ೧೦ ಅಧಿಕಾರಿಗಳನ್ನು ಕಾರ್ಯಕ್ರಮಕ್ಕೆ ನಿಯೋಜಿಸಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ಆಂದೋಲನಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರಶಸ್ತಿ ಪ್ರಧಾನವೂ ಸಹ ನಡೆಯಲಿದೆ.
ಗದಗ ಜಿಲ್ಲಾಧಿಕಾರಿಗಳಾದ ವೈಶಾಲಿ ಎಂ.ಎಲ್. ಅವರು ಈ ಹಿಂದೆ ಶಿವಮೊಗ್ಗ ಜಿಲ್ಲೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಸ್ವಚ್ಛ ಭಾರತ್ ಮಿಷನ್ ( ಗ್ರಾ) ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ , ದ್ರವತ್ಯಾಜ್ಯ ನಿರ್ವಹಣೆ, ಶೌಚಾಲಯಗಳ ಬಳಕೆ, ಸುಜಲಾಂ ೨.೦ ಅಡಿ ಇಂಗುಗುಂಡಿಗಳ ನಮೂದು ಮುಂತಾದ ಚಟುವಟಿಕೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವುದನ್ನು ಪರಿಗಣಿಸಲಾಗಿದೆ. ಇವರ ಸೇವೆಯನ್ನು ಗಮನಿಸಿ ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರನ್ನು ಸನ್ಮಾನಿಸಲಾಗುತ್ತಿದೆ.


Gadi Kannadiga

Leave a Reply