ಬೆಳಗಾವಿ:- ಕೆಎಲ್‌ಇ ವೇಣುಧ್ವನಿ ೯೦.೪ ಎಫ್‌ಎಮ್ ಸಮುದಾಯ ಬಾನುಲಿ ಕೇಂದ್ರ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಪಂಚಾಯತ ಬೆಳಗಾವಿ ಇವರ ಸಹಯೋಗದಲ್ಲಿ ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ ಎಂಬ ಘೋಷ ವಾಕ್ಯದಡಿಯಲ್ಲಿ ಬೆಳಗಾವಿ ತಾಲೂಕಿನ ಹಂದಗನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಸರಸ್ವತಿ ಫ್ರೌಡ ಶಾಲೆಯಲ್ಲಿ ದಿ ೧೩ ರಂದು ವೈಯಕ್ತೀಕ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಳಗಾವಿ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಶೀಲಾ ಪೊದ್ಧಾರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವಿದ್ಯಾರ್ಥಿನಿಯರಿಗೆ ಋತುಚಕ್ರ ನೈರ್ಮಲ್ಯ, ವೈಯಕ್ತಿಕ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಮಹತ್ವ ಮತ್ತು ಶೌಚಾಲಯ ಬಳಕೆ ಕುರಿತು ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಿಸದರು.
ಕೆಎಲ್‌ಇ ವೇಣುಧ್ವನಿ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಅವರು ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡಗಳ ಸರಿಯಾದ ಬಳಕೆ ಮತ್ತು ವಿಲೇವಾರಿ ಕುರಿತು ಜಾಗೃತಿ ಮೂಡಿಸಿದರು
ಈ ಸಂದರ್ಭದಲ್ಲಿ ಸರಸ್ವತಿ ಫ್ರೌಡ ಶಾಲೆಯ ಮುಖ್ಯೋಪದ್ಯಾಯರು, ಶಿಕ್ಷಕಿಯರು ಹಾಗೂ ಸಿಬ್ಭಂದಿ ಮತ್ತು ವೇಣುಧ್ವನಿ ಸಮುದಾಯ ಬಾನುಲಿ ಕೇಂದ್ರದ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.