This is the title of the web page
This is the title of the web page

Please assign a menu to the primary menu location under menu

State

ದೇಶದಲ್ಲಿ ಮತ್ತೆ ಕೊರೊನಾ ನರ್ತನ : 33,750 ಜನರಿಗೆ ಅಂಟಿದ ಮಾರಿ


ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 33,750 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 123 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 481893 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 145582 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10846 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34295407 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 8,78,990 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 23,30,706 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,45,68,89,306 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


Gadi Kannadiga

Leave a Reply