This is the title of the web page
This is the title of the web page

Please assign a menu to the primary menu location under menu

Local News

ನಂದಿನಿ ಹಾಲಿಗೆ 3ರೂ. ಹೆಚ್ಚಿಸಿ: ಸಿಎಂಗೆ ಬಾಲಚಂದ್ರ ಜಾರಕಿಹೊಳಿ ಮನವಿ


ಬೆಳಗಾವಿ: ಪ್ರತಿ ಲೀಟರ್ ನಂದಿನಿ ಹಾಲಿಗೆ 3 ರೂ. ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಕಚ್ಚಾ ಸಾಮಗ್ರಿ, ವಿದ್ಯುತ್, ಸಾಗಣೆ ವೆಚ್ಚ ಹೆಚ್ಚಳವಾಗಿದೆ. ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗಿಸಲು ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬೊಮ್ಮಾಯಿಗೆ ಬಾಲಚಂದ್ರ ಜಾರಕಿಹೊಳಿ ಕೋರಿದ್ದಾರೆ.

ಈ ಕುರಿತು ಬಾಲಚಂದ್ರ ಜಾರಕಿಹೊಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ದೇಶದ ವಿವಿಧ ಸಹಕಾರ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ದರ ಹೆಚ್ಚಿಸಿವೆ. ನಂದಿನಿ ಹಾಲಿನ ಮಾರಾಟ ದರಕ್ಕೆ ಹೋಲಿಸಿದರೆ ಲೀಟರ್ ಗೆ 8 ರಿಂದ 10 ರೂ. ಹೆಚ್ಚಳವಾಗಿದೆ.

ಹೀಗಾಗಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Gadi Kannadiga

Leave a Reply