This is the title of the web page
This is the title of the web page

Please assign a menu to the primary menu location under menu

Local NewsCrime News

ಬೆಳಗಾವಿಯಲ್ಲಿ ಹರಿದ ನೆತ್ತರು,ಯುವಕನ ಬರ್ಬರ ಕೊಲೆ


ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ.

ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Gadi Kannadiga

Leave a Reply