ಬೆಳಗಾವಿ: ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಮಾರಕಾಸ್ತ್ರದಿಂದ ಇರಿದು, ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶಿವಾಜಿ ನಗರಥ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ದುರ್ದೈವಿ. ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಈತನ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅರೆಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ದೊರೆತಿದೆ. ನಿನ್ನೆ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಹಾಗೂ ಶ್ವಾಸನಾಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.