This is the title of the web page
This is the title of the web page

Please assign a menu to the primary menu location under menu

Local News

ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡವಿದೆ: ನಳೀನಕುಮಾರ ಕಟೀಲ


ಹುಬ್ಬಳ್ಳಿ: ರಾಜ್ಯದಲ್ಲಿ ನಡೆದ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಇಂದಿಲ್ಲಿ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ ಎಂದು ದೂರಿದರು.

ಆರ್‌ಎಸ್‌ಎಸ್ ಒಂದು ಸೇವಾ ಸಂಸ್ಥೆ. ದೇಶಭಕ್ತರನ್ನು ನಿರ್ಮಾಣ ಮಾಡುವ ಸಂಸ್ಥೆ ಆರ್‌ಎಸ್‌ಎಸ್. ಇದಕ್ಕೆ ಕೈ ಹಾಕಿದ ನೆಹರು ಮತ್ತು ಇಂದಿರಾ ಗಾಂಧಿ ಕೈಸುಟ್ಟುಕೊಂಡು ಹೋಗಿದ್ದಾರೆ. ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ. ಸಿದ್ದರಾಮಯ್ಯ ಚಡ್ಡಿಗೆ ಬೆಂಕಿ ಹಾಕಲು ಹೇಳಿದ್ದಾರೆ, ಅವರೇ ಸುಟ್ಟು ಹೋಗುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ದ ಕಟೀಲ್ ವಾಗ್ದಾಳಿ ನಡೆಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ ಕಾದು ನೋಡಿ ಎಂದು ಕಟೀಲ್ ಅವರು, ಕಾಂಗ್ರೆಸ್‌ಗೆ ಹಿಂದುಗಳ ಮತ ಬೇಡ ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ. ಜೆಡಿಎಸ್ ಮುಸ್ಲಿಂ ಮತ ಗಳನ್ನು ಓಲೈಕೆ ಮಾಡಲಿಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ ಎಂದರು.

ಪಠ್ಯಪುಸ್ತಕದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಪಠ್ಯಪುಸ್ತಕದಲ್ಲಿ ತಪ್ಪುಗಳಿದ್ದರೆ ತಿದ್ದುವುದಾಗಿ ಸರ್ಕಾರ ಹೇಳಿದೆ ಎಂದು ಕಟೀಲ್ ತಿಳಿಸಿದರು.

ಶ್ರೀರಾಮಸೇನೆಯಿಂದ ಅಜಾನ್ ವಿರೋಧಿಸಿ ಎರಡನೇ ಹಂತಪಾಲ್ಗೊಂಡಿದ್ದರು.ಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಸಂಘಟನೆಗಳಿಗೆ ಪ್ರತಿಭಟನೆ ಮಾಡುವ ಅಧಿಕಾರವಿದೆ. ಅವರು ಮಾಡಲಿ ಆದರೆ ಅವರ ಅಜೆಂಡಾಗಳಿಗೆ ನಾವು ಮನ್ನಣೆ ನೀಡಲು ಆಗಲ್ಲ. ಹಿಂದೂ ಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ಅದಕ್ಕೆ ಬದ್ಧವಾಗಿ ದೇಶದಲ್ಲಿ ಹಲವಾರು ಕಾಯ್ದೆ ತರಲಾಗಿದೆ. ಆದರೆ ಸರ್ವೇ ಜನ ಸುಖಿನೋ ಭವಂತು ಎನ್ನುವ ತತ್ವ ನಮ್ಮದಾಗಿದೆ. ಒಂದು ಸರ್ಕಾರದಲ್ಲಿದ್ದಾಗ ಸಂವಿಧಾನ ಆಧಾರದ ಮೇಲೆ ಕೆಲಸ ಮಾಡಬೇಕು. ಆ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮೇಯರ್ ಈರೇಶ ಅಂಚಟಗೇರಿ, ಉಪಮೇಯರ್ ಉಮಾ ಮುಕುಂದ, ಜಿಲ್ಲಾಧ್ಯಕ್ಷರಾದ ಸಂಜಯ ಕಪಟಕರ, ಬಸವರಾಜ ಕೂಂದಗೋಳಮಠ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ಅಶೋಕ ಕಾಟವೆ, ಚಂದ್ರಶೇಖರ ಗೋಕಾಕ ಪಾಲ್ಗೊಂಡಿದ್ದರು


Gadi Kannadiga

Leave a Reply