This is the title of the web page
This is the title of the web page

Please assign a menu to the primary menu location under menu

Local News

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರ ಆರೋಪಿಸಿ ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ


ಬೆಳಗಾವಿ: ಬೆಳಗಾವಿಯ ಸ್ಮಾರ್ಟ್ ಸಿಟಿ ಯೋಜನೆಯ  ಸ್ಮಾರ್ಟ್ ಕ್ಲಾಸ್ ಟೆಂಡರ್ ನಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.

ಸೋಮವಾರ ಬೆಳಗಾವಿ ಜಿಲ್ಲಾಧೀಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಸ್ಮಾರ್ಟ್ ಸಿಟಿ ಟೆಂಡರ್ ನಲ್ಲಿ ಭಾರಿ ಅವ್ಯವಹಾರದ ಅನುಮಾನ ೆದ್ದು ಕಾಣುತ್ತಿದ್ದು ಕೂಡಲೇ ಸಿಬಿಐ ತನಿಖೆಗೆ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಅಭಿಲಾಷ್,ಅವರು ಮಾತನಾಡಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭಾರಿ ಅವ್ಯವಹಾರಗಳು ನಡೆದಿದ್ದು ಅದಕ್ಕೆ ಸಂಭಂಧಿಸಿದ ಪೂರಕ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ನೀಡಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠೀಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು.

 


Gadi Kannadiga

Leave a Reply