ಬೆಳಗಾವಿ : ಫೆ.೫ರಂದು ಬೆಳಗಾವಿಯಲ್ಲಿ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದಿಂದ ಕಿತ್ತೂರು ಕರ್ನಾಟಕ, ಬೆಳಗಾವಿ ವಿಭಾಗದ ನಿವೃತ್ತ ನೌಕರರ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಮುದಕವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಗನೂರು ರುದ್ರಾಕ್ಷಿ ಮಠದ ಪೂಜ್ಯ ಶ್ರೀ ಪ್ರಭುದೇವ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ೧೧ ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊರಟಗೆರೆಯ ಪೂಜ್ಯ ಶ್ರೀ ಬಸವಕಿರಣ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಸಂಘದ ರಾಜ್ಯಾಧ್ಯಕ್ಷ ಡಾ. ಎಲ್. ಭೈರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸಂಘದ ಬೆಳಗಾವಿ ವಿಭಾಗದ ಜಿಲ್ಲಾಧ್ಯಕ್ಷ ಎಸ್. ಜಿ. ಸಿದ್ನಾಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಜಯಾ ಟ್ರಾಮಾ ಸೆಂಟರ್ ನಿರ್ದೇಶಕ ಡಾ. ರವಿ ಪಾಟೀಲ ಆಗಮಿಸುವರು. ಅತಿಥಿಗಳಾಗಿ ಸಂಘದ ಪ್ರಧಾನ ಕಾರ್ಯದರ್ಶಿ ರಂಗೇಗೌಡ, ರಾಜ್ಯ ಉಪಾಧ್ಯಕ್ಷೆ ಶಾರದಮ್ಮ, ಹಿರಿಯ ಉಪಾಧ್ಯಕ್ಷ ಸೂರ್ಯಕಾಂತ ಕದಂ, ವಿಜಯಪುರ ಜಿಲ್ಲಾಧ್ಯಕ್ಷ ಎಸ್. ಪಿ. ಬಿರಾದಾರ, ಸಂಘಟನಾ ಕಾರ್ಯದರ್ಶಿ ಸುರೇಶ ನಾಯ್ಕ, ಹಿರಿಯ ನಾಗರಿಕರ ಸಂಘದ ರಾಜ್ಯಾಧ್ಯಕ್ಷ ಅಡಿವೆಪ್ಪ ಬೆಂಡಿಗೇರಿ, ಸಮಾಜಸೇವಕ ಮುರುಘೇಂದ್ರಗೌಡ ಪಾಟೀಲ, ಡಾ. ಬಸವರಾಜ ಗೋಮಾಡಿ ಆಗಮಿಸುವರು. ಮಹಾಂತೇಶ ತಾಂವಸಿ, ಎಸ್. ಎಸ್. ಕುಂದ್ರಾಳ, ನವೀನ ಗಂಗರೆಡ್ಡಿ ಸೇರಿದಂತೆ ೮೦ ವರ್ಷ ಮೇಲ್ಪಟ್ಟ ನಿವೃತ್ತ ನೌಕರರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
Gadi Kannadiga > Local News > ಬೆಳಗಾವಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಮಾವೇಶ