ಬೆಳಗಾವಿ : ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಮಹಾನಗರ ಪಾಲಿಕೆ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ನಗರದ ವಡಗಾವಿಯ ಮಾಧವಪೂರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ(ಏ.29) ಬೆಳಗಾವಿ ತಾಲೂಕಾ ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಜಿಲ್ಲೆಯ ವಿಧಾನಸಭೆ, ವಿಧಾನಪರಿಷತ್ತು ಸದಸ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ ಎಂದು ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ಶಿವಾನಂದ ಮಾಸ್ತಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.