ಕೊಪ್ಪಳ ಮಾರ್ಚ್ ೧೩): ಪ್ರವಾಸೋದ್ಯಮ ಇಲಾಖೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮವು ಮಾರ್ಚ ೧೪ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸುವರು. ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಅವರು ಘನ ಉಪಸ್ಥಿತಿ ವಹಿಸುವರು.
ಶಾಸಕರಾದ ಪರಣ್ಣ ಮುನವಳ್ಳಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಆನೆಗೋಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ತಿಮ್ಮಪ್ಪ ಬಾಳೇಕಾಯಿ, ಸಾಣಾಪುರ ಗ್ರಾಪಂ ಅಧ್ಯಕ್ಷರಾದ ದುರುಗಮ್ಮ ವೆಂಕಟೇಶ, ವಿಶೇಷ ಆಹ್ವಾನಿತರಾಗಿ ಪ್ರವಾಸೋದ್ಯಮ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಕಪಿಲ್ ಮೋಹನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್, ಧಾರ್ಮಿಕ ದತ್ತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಎನ್.ಜಯರಾಂ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಡಾ.ವಿ. ರಾಮ್ ಪ್ರಸಾತ್ ಮನೋಹರ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಹೆಚ್ ಬಸವರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ತಹಸೀಲ್ದಾರರಾದ ಮಂಜನಾಥ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಅಂಜನಾದ್ರಿ ಬೆಟ್ಟದ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾರ್ಚ ೧೪ಕ್ಕೆ
ಅಂಜನಾದ್ರಿ ಬೆಟ್ಟದ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾರ್ಚ ೧೪ಕ್ಕೆ
Suresh13/03/2023
posted on
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023