This is the title of the web page
This is the title of the web page

Please assign a menu to the primary menu location under menu

State

* ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹಾಗೂ ವಾಹನ ನಿಲುಗಡೆಗಾಗಿ ನೆಲಹಾಸು ಮಾಡುವ ಕಾಮಗಾರಿಗೂ ಭೂಮಿ ಪೂಜೆ * ಶ್ರೀ ಅಮ್ಮ ನಿಲಯ ಸಚಿವ ಆನಂದ ಸಿಂಗ್ ಲೋಕಾರ್ಪಣೆ


ಕೊಪ್ಪಳ ಮಾರ್ಚ್ ೦೬ : ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನದ ಆವರಣದಲ್ಲಿ ಅಂದಾಜು ೧೦.೨೭ ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಅಮ್ಮ ನಿಲಯವನ್ನು ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ಅವರು ಮಾರ್ಚ ೬ರಂದು ಲೋಕಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಸಚಿವರು, ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ೫.೫೪ ಕೋಟಿ ರೂ ವೆಚ್ಚದಲ್ಲಿ ಶ್ರೀ ಅಮ್ಮ ನಿಲಯ ನಲ ಮಹಡಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ. ಈ ಕಟ್ಟಡದಲ್ಲಿ ಭಕ್ತಾದಿಗಳು ಉಳಿದುಕೊಳ್ಳಲು ಒಟ್ಟು ೧೫ ಕೊಠಡಿಗಳು ಮತ್ತು ಶುಭಕಾರ್ಯಗಳನ್ನು ಮಾಡಲು ಹಾಲ್ ಮತ್ತು ಅಡುಗೆ ಕೋಣೆ ನಿರ್ಮಿಸಲಾಗಿದೆ. ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಶ್ರೀ ಅಮ್ಮ ನಿಲಯ ಮೊದಲನೇ ಮಹಡಿ ಕಾಮಗಾರಿಯನ್ನು ಅಂದಾಜು ೪.೭೪ ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಸಲಾಗಿದೆ. ಈ ಕಟ್ಟಡದಲ್ಲಿ ಭಕ್ತಾದಿಗಳಿಗೆ ಉಳಿದುಕೊಳ್ಳಲು ಒಟ್ಟು ೩೦ ಕೊಠಡಿಗಳನ್ನು ನಿರ್ಮಿಸಲಾಗಿದೆ. ಶ್ರೀ ಅಮ್ಮ ನಿಲಯದಲ್ಲಿ ಒಟ್ಟು ೪೫ ಕೊಠಡಿಗಳು ಭಕ್ತರ ವಸತಿಗೆ ಲಭ್ಯವಾಗುತ್ತಿವೆ ಎಂದು ತಿಳಿಸಿದರು.
ಅದೇ ರೀತಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಯಥೇಚ್ಛವಾಗಿ ಉತ್ಪತ್ತಿಯಾಗುವ ಘನ ಮತ್ತು ದ್ರವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಕೆ.ಆರ್.ಐ.ಡಿ.ಎಲ್. ಬೆಂಗಳೂರು ಇವರು ಅಂದಾಜುಪಟ್ಟಿ ತಯಾರಿಸಿದ್ದು, ಅದರಂತೆ ದೇವಸ್ಥಾನದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅದೇ ರೀತಿ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳು ಉಳಿದುಕೊಳ್ಳಲು ಹಾಗೂ ವಾಹನಗಳ ನಿಲುಗಡೆಗೆ ಅನುಕೂಲವಾಗುವಂತೆ ದಾಸೋಹದ ಪಕ್ಕದಿಂದ ವಾಣಿಜ್ಯ ಮಳಿಗೆಗಳವರೆಗೆ ಇರುವ ಖಾಲಿ ಜಾಗದಲ್ಲಿ ಮಣ್ಣು ಹಾಕಿ ಸಮತಟ್ಟು ಮಾಡಿ ಸಿ ಸಿ ನೆಲಹಾಸು ಮಾಡುವ ಕಾಮಗಾರಿಯ ಅಂದಾಜು ಪಟ್ಟಿಗೆ ನಿರ್ಮಿತಿ ಕೇಂದ್ರದವರು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ಕಾಮಗಾರಿಗು ಸಹ ಭೂಮಿ ಪೂಜೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು. ಜಿಲ್ಲಾಡಳಿತ ಕೊಪ್ಪಳ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಶ್ರೀಕ್ಷೇತ್ರ ಹುಲಗಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ, ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ಶಾಸಕರಾದ ಕೆ.ರಾಘವೆಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಬೊಮ್ಮಕ್ಕನವರ್, ಮಾಜಿ ಜಿಪಂ ಅಧ್ಯಕ್ಷರಾದ ಟಿ.ಜನಾರ್ಧನ ಹುಲಿಗಿ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ, ಕೊಪ್ಪಳ ತಹಶೀಲ್ದಾರರಾದ ಅಮರೇಶ ಬಿರಾದಾರ, ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸೇರಿದಂತೆ ಹಲವು ಗಣ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


Gadi Kannadiga

Leave a Reply