This is the title of the web page
This is the title of the web page

Please assign a menu to the primary menu location under menu

Local News

ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ


ಬೆಳಗಾವಿ:೨೪- ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ ವತಿಯಿಂದ, ಮಂಗಳವಾರ ದಿ:೨೭/೦೯/೨೦೨೨, ರಂದು, ಮುಂಜಾನೆ:೧೧:೦೦ ಕ್ಕೆ, ಸ್ಥಳ: “ಕನ್ನಡ ಭವನ” ನೆಹರು ನಗರ ಬೆಳಗಾವಿಯಲ್ಲಿ, ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.
ಕ.ಸಾ.ಪ.ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಶ್ರೀ. ಮೆಟಗುಡ್ಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಜಶೇಖರ ಬಿರಾದಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಕನ್ನಡ ಸಾಹಿತ್ಯ ಪರಿಷತ್ತಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆಗಳು” ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಶ್ರೀ. ಪ್ರವೀಣ ಮಠಪತಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ಖಾನಾಪೂರ ಇವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಡಾ.ಸುನೀಲ ಪರೀಟ ಅವರಿಗೆ ಗೌರವ ಸನ್ಮಾನ ಮಾಡಲಾಗುವುದು.
ಕ.ಸಾ.ಪ.ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕಾ ಅಧ್ಯಕ್ಷರುಗಳು, ಜಿಲ್ಲಾ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಸಾಹಿತಿಗಳು, ಕಲಾವಿದರು, ಕಸಾಪ ಸರ್ವ ಸದಸ್ಯರು ಮತ್ತು ಸಮಸ್ತ ಕನ್ನಡ ಮನಸ್ಸುಗಳು ಎಲ್ಲರೂ ತಪ್ಪದೇ ಆಗಮಿಸಿ ಶೋಭೆ ತರಬೇಕೆಂದು ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ.ಮಂಗಲಾ ಶ್ರೀ ಮೆಟಗುಡ್ಡ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply