ಬೆಳಗಾವಿ: ಮಂತ್ರಿ ಅಥವಾ ಶಾಸಕ ಸ್ಥಾನಗಳು ನಮ್ಮ ತಾತನ ಆಸ್ತಿ ಅಲ್ಲ. ನನಗೆ ಮಂತ್ರಿ ಸ್ಥಾನ ಕೊಡದಿದ್ದರು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದಿದ್ದರೂ ಬಿಜೆಪಿಯಲ್ಲೆ ಮುಂದುವರೆಯುತ್ತೇನೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಲ್ಲಿ ನಿರಾಣಿ ಅವರಿಗೆ ಕೋಕ್ ನೀಡಲಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರಿಸುತ್ತ ಅವರು, ನಮ್ಮ ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಭದ್ದವಾಗಿದ್ದೇನೆ. ಅವರು ನನಗೆ ಬರುವ ವಿಧಾನ ಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದಿದ್ದರು ಕೂಡಾ ಪಕ್ಷಕ್ಕಾಗಿ ಕೆಲಸ ಮಾಡುತ್ತ ಪಕ್ಷದಲ್ಲಿಯೇ ಉಳಿದುಕೊಳ್ಳುತೇನೆ ಎಂದರು.
ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಹೊಂದಲು ಮೂಲಭೂತ ಸೌಕರ್ಯ ಬೇಕು. ಕಾರವಾರ ಪೋರ್ಟ್ನನ್ನು ಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕೆಲಸ ಮಾಡಲಾಗುತ್ತದೆ. ಅದರಂತೆ ಕಿತ್ತೂರಿನಲ್ಲಿಯೂ ಒಂದು ವಿಮಾನ ನಿಲ್ದಾಣ ಮಾಡುವ ನಿಟ್ಟಿನಲ್ಲಿ ಖಾಸಗಿ ಬಂಡವಾಳ ಹೂಡಿಕೆದಾರರ ಜತೆ ಮಾತುಕತೆ ನಡೆಸಲಾಗಿದೆ. ಅವರು ಸಹ ಸಹಮತ ನೀಡಿದ್ದಾರೆ ಶೀಘ್ರದಲ್ಲಿಯೇ ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಿಕ್ಷಣ ಮತ್ತು ಪದವಿದರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಬೇರೆ ಪಕ್ಷದ ಅಭ್ಯರ್ಥಿಗಳ ಘೋಷಣೆ ಇನ್ನೂ ಆಗಿಲ್ಲ. ಆದರೆ ಬಿಜೆಪಿ ಪಕ್ಷದಿಂದ ಪದವಿಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಹಾಗೂ ಶಿಕ್ಷಕ ಮತಕ್ಷೇತ್ರಕ್ಕೆ ಅರುಣ ಶಹಾಪುರಕರ ಅವರಿಗೆ ಘೋಷಣೆ ಮಾಡಿದೆ. ಸ್ಪಷ್ಟ ಬಹುಮತದಿಂದ ಎರಡು ಕ್ಷೇತ್ರವನ್ನು ಗೆಲವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.