ಬೆಳಗಾವಿ: ಬಡವರನ್ನು ಬಡವರನ್ನಾಗಿ ಮಾಡೋದೇ ಬಿಜೆಪಿಯ ಸಿದ್ಧಾಂತ ಆಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗ್ತಾ ಇದ್ದರೂ ಪ್ರಧಾನಿ ಮೋದಿ ಅವರು ಮಾತ್ರ ಮಾತನಾಡುತ್ತಲೇ ಇಲ್ಲ ಎಂಬುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರತಿದಿನ ಅಗತ್ಯ ವಸ್ತುಗಳ ಬೆಲೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗ್ತಾನೆ ಇದೆ. ಪ್ರಧಾನಿ ಮೋದಿ ಮಾತ್ರ ಮೌನವಾಗಿದ್ದಾರೆ. ಒಂದು ಮಾತನ್ನು ಆಡ್ತಾನೇ ಇಲ್ಲ ಎಂದರು.
ಇನ್ನು ಕಾಂಗ್ರೆಸ್ ಪಕ್ಷದಿಂದ ಪದವೀಧರ – ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ, , ಆದಷ್ಟು ಬೇಗ . ಹೈಕಮಾಂಡ್ ಜೊತೆಗೆ ಚರ್ಚಿಸಿ ವರಿಷ್ಠರು ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದಾರೆ ಎಂದರು.