ಗದಗ ಅಗಸ್ಟ ೨೯: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ ೩೧ ರಂದು ಸಂಜೆ ೪.೩೦ ಗಂಟೆಗೆ ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಘನ ಉಪಸ್ಥಿತಿಯಲ್ಲಿ ಜರುಗುವ ಈ ಕಾರ್ಯಕ್ರಮವನ್ನು ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು , ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ರೋಣ ಶಾಸಕರಾದ ಜಿ.ಎಸ್. ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷರಾದ ಉಷಾ ಮಹೇಶ್ ದಾಸರ, ಗದಗ ಬೆಟಗೇರಿ ನಗರ ಸಭೆ ಉಪಾಧ್ಯಕ್ಷರಾದ ಸುನಂದ ಪ್ರಕಾಶ ಬಾಕಳೆ ಆಗಮಿಸುವರು.
ಗದಗ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ ಪ್ರಾಧ್ಯಾಪಕ ಪ್ರೊ. ಸಿದ್ಧಲಿಂಗೇಶ ಸಜ್ಜನಶೆಟ್ಟರ್ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜೀವನ ಮತ್ತು ಸಂದೇಶ ಕುರಿತು ಉಪನ್ಯಾಸ ನೀಡುವರು. ಮಲ್ಲೇಶ ಹೂಗಾರ ವಚನ ಗಾಯನ ಪ್ರಸ್ತುತ ಪಡಿಸುವರು.
ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀಮತಿ ಸಿ.ಶಿಖಾ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ. ಎಸ್. ನೇಮಗೌಡ ಸರ್ವರಿಗೂ ಸ್ವಾಗತ ಕೋರಿದ್ದಾರೆ.