ಬೆಂಗಳೂರು : ಡಿಸೆಂಬರ್ 19 ರಿಂದ 30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ವಿವಿಧ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿದ್ದರು.