ಯರಗಟ್ಟಿ: ರಾಜ್ಯ ಸರ್ಕಾರವು ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಬಳಿಕ ಸವದತ್ತಿ, ಯರಗಟ್ಟಿ ತಾಲೂಕಿನ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಎದುರಾಗಿದೆ.
ಗ್ರಾಮೀಣ ಭಾಗದಿಂದ ನಗರ ಪ್ರದೇಶಗಳಿಗೆ ಸಂಚರಿಸುವ ಬಹುತೇಕ ಬಸ್‌ಗಳು ತುಂಬಿ ಬರುತ್ತಿದ್ದು, ವಿದ್ಯಾರ್ಥಿಗಳು ಬಾಗಿಲಲ್ಲೆ? ನಿಂತು, ಜೋತು ಬಿದ್ದು ಪ್ರಯಾಣ ಮಾಡುವ ಅನಿವಾರ್ಯ ಎದುರಾಗಿದೆ.
ಅಷ್ಟೆ? ಅಲ್ಲದೆ ಕೆಲವು ಬಸ್ ಕೊರತೆ ಸಹ ಬಹುವಾಗಿ ಕಾಡುತ್ತಿದೆ. ವಿದ್ಯಾರ್ಥಿಗಳು ಪ್ರಾಣ ಪಣಕ್ಕಿಟ್ಟು ಬಸ್ ಏರುವಂತಾಗಿದೆ.
ಕಳೆದ ಹಲವು ವರ್ಷಗಳಿಂದ ಬಸ್ ಸಮಸ್ಯೆಯನ್ನು ವಿದ್ಯಾರ್ಥಿಗಳು ಮೊದಲಿನಿಂದಲೂ ಎದುರಿಸಿಕೊಂಡು ಬರುತ್ತಿದ್ದಾರೆ. ಈಗ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಜಾರಿಯಾದ ಬಳಿಕ ಮತ್ತಷ್ಟುಹೆಚ್ಚಿದೆ.
ಸವದತ್ತಿ, ಯರಗಟ್ಟಿ ತಾಲೂಕಿನ ವ್ಯಾಪ್ತಿಯ ಹಳ್ಳಿ ಗಳಿಂದ ಪಟ್ಟಣಕ್ಕೆ ಬರಯವ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ಬಸ್. ಸರಿಯಾದ ವೇಳೆಗೆ ಶಾಲಾ, ಕಾಲೇಜಿಗೆ ವಿದ್ಯಾರ್ಥಿಗಳು ತೆರಳಬೇಕು. ವಿದ್ಯಾರ್ಥಿಗಳ ಪ್ರಯಾಣಕ್ಕೆಂದೇ ಪ್ರತ್ಯೆ?ಕ ಬಸ್‌ಗಳಿರುವುದಿಲ್ಲ. ಹಾಗಾಗಿ ಪ್ರಯಾಣಿಕರಿಂದ ತುಂಬಿ ಬರುವ ಬಸ್‌ನ್ನು ವಿದ್ಯಾರ್ಥಿಗಳು ಹತ್ತಬೇಕಾಗಿದೆ ಎಂದು ಜನರು ದೂರಿದ್ದಾರೆ.
Gadi Kannadiga > Local News > ವಿದ್ಯಾರ್ಥಿಗಳ ಪ್ರಾಣಕ್ಕೆ ಕುತ್ತು ತರುತ್ತಿದೆ ಬಸ್ ಪ್ರಯಾಣ!
ವಿದ್ಯಾರ್ಥಿಗಳ ಪ್ರಾಣಕ್ಕೆ ಕುತ್ತು ತರುತ್ತಿದೆ ಬಸ್ ಪ್ರಯಾಣ!
Suresh14/07/2023
posted on
