ಖಾನಾಪುರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ
ವ್ಯಾಪಾರಸ್ಥರು ಪ್ರತ್ಯೇಕವಾದ ಪರವಾನಿಗೆ ಪಡೆಯಬೇಕೆಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಂತೋಷ ಕುರಬೆಟ್ ಹೇಳಿದರು. ಖಾನಾಪುರ ಪಟ್ಟಣ ಪಂಚಾಯತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ 2022ರ ಮೇ.19ರಂದು ಹೊರಡಿಸಿರುವ ಕರ್ನಾಟಕ ರಾಜ್ಯ ಪತ್ರ ಸಂಖ್ಯೆ:ಯುಡಿಡಿ/೧೬೪/ಜಿಇಇಲ್/೨೦೧೩ ರಂತೆ ರಾಜ್ಯದ ಮಾಹಾನಗರ ಪಾಲಿಕೆಗಳು ಎಲ್ಲಾ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಈ ಪರವಾನಿಗೆ ಅವಶ್ಯವಿದೆ ಎಂದು ತಿಳಿಸಿದರು.
ಖಾನಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾದ ಪರವಾನಿಗಿ ಪಡೆಯಲು ಪಟ್ಟಣ ಪಂಚಾಯತಿಯಿಂದ ಅರ್ಜಿ ನಮೂನೆ ಪಡೆದು ಅಗತ್ಯ ಮಾಹಿತಿಗಳೊಂದಿಗೆ ಮಾ.31ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ಶುಲ್ಕ ರೂ:5೦೦ ಗಳಾಗಿದ್ದು 5ವರ್ಷ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು. ಮಾರ್ಚ 31ರ ನಂತರ ಪ್ರತ್ಯೇಕ ಪರವಾನಿಗೆ ಪಡೆಯದೆ ತಂಬಾಕು ಉತ್ಪನ್ನ ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.