This is the title of the web page
This is the title of the web page

Please assign a menu to the primary menu location under menu

Local News

ಆಗಸ್ಟ 12ರೊಳಗೆ ಮೇಯರ್, ಉಪಮೇಯರ್ ಆಯ್ಕೆ: ಶಾಸಕ ಅಭಯ ಪಾಟೀಲ್


ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಆಯ್ಕೆಯನ್ನು ಅಗಸ್ಟ್ 12ರ ಒಳಗೆ ಮಾಡಲಾಗುತ್ತದೆ. ಬರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅವರೇ ದ್ವಾಜಾರೋಹಣ ಮಾಡಲಿದ್ದಾರೆ ಎಂದು ಬೆಳಗಾವಿ ದಕ್ಷಿಣ ಭಾಗದ ಶಾಸಕ ಅಭಯ ಪಾಟೀಲ್ ಹೇಳಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಅಡ್ವೊಕೇಟ್ ಜನರಲ್ ಜೊತೆಗೆ ಚರ್ಚೆ ಮಾಡಲಾಗಿದ್ದು ಸ್ವಾತಂತ್ರ್ಯ ದಿನಾಚರಣೆ ಮೊದಲೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ ಮೊದಲ ವಾರದಲ್ಲಿ ಪ್ರಕ್ರಿಯೆ ಆರಂಭವಾಗಲಿದ್ದು, ಆಗಸ್ಟ್ 12ರೊಳಗೆ ಮೇಯರ್-ಉಪಮೇಯರ್ ಆಯ್ಕೆ ನಡೆಯಲಿದೆ ಎಂದರು.

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಾಲಿಕೆ ಮೇಲೆ ಬಿಜೆಪಿ ಮೇಯರ್ ರಾಷ್ಟ್ರಧ್ವಜ ಹಾರಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಪಾಲಿಕೆ ಚುನಾವಣೆಯಾಗಿ ತಿಂಗಳುಗಳೇ ಕಳೆದರು ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ಆಯ್ಕೆ ಪ್ರಕ್ರಿಯೆ ನಡೆಯದ ಕಾರಣ ಹಲವು ಗೊಂದಲಗಳಿಗೆ ಎಡೆಮಾಡಿಕೊಟ್ಟಿದ್ದಲ್ಲದೆ, ಬೆಳಗಾವಿಗರ ಆಕ್ರೋಶಕ್ಕೂ ಕಾರಣವಾಗಿತ್ತು ಇದೀಗ ಆಯ್ಕೆ ಪ್ರಕ್ರಿಯೆಗೆ ದಿನಗಣನೆ ಶುರುವಾಗಿದ್ದು ಯಾರು ಮೇಯರ್, ಉಪಮೇಯರ್ ಗದ್ದುಗೆ ಎರಲಿದ್ದಾರೆ ಎಂದು ಕಾದು ನೋಡಬೇಕಿದೆ

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನ ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಬಿಜೆಪಿ ಮೇಯರ್ ರಾಷ್ಟ್ರಧ್ವಜ ಹಾರಿಸುವುದು ನಿಶ್ಚಿತ ಎಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಅಭಯ್ ಪಾಟೀಲ್ ಬೆಳಗಾವಿ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಅಡ್ವೊಕೇಟ್ ಜನರಲ್ ಜೊತೆಗೆ ಮಾತನಾಡಿದ್ದೇವೆ. ಆಗಸ್ಟ್ ಮೊದಲ ವಾರದಲ್ಲಿ ಪ್ರಕ್ರಿಯೆ ಆರಂಭವಾಗಲಿದ್ದು, ಆಗಸ್ಟ್ 12ರೊಳಗೆ ಮೇಯರ್-ಉಪಮೇಯರ್ ಆಯ್ಕೆ ಆಗಲಿದೆ. ಅದೇ ರೀತಿ ಆಗಸ್ಟ್ 15ರಂದು ಪಾಲಿಕೆ ಮೇಲೆ ಬಿಜೆಪಿ ಮೇಯರ್ ರಾಷ್ಟ್ರಧ್ವಜ ಹಾರಿಸುವುದು ಗ್ಯಾರಂಟಿ ಎಂದರು.


Gadi Kannadiga

Leave a Reply