ಕೊಪ್ಪಳ ನವೆಂಬರ್ ೨೬ : ಸಂವಿಧಾನ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು (ನ.೨೬) ಸಂವಿಧಾನದ ಪೀಠಿಕೆ (Pಡಿeಚಿmbಟe) ಯನ್ನು ಓದುವುದರ ಮೂಲಕ ಸಂವಿಧಾನ ದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಆಹಾರ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಚಿದಾನಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸಂವಿಧಾನದ ಪೀಠಿಕೆ ಓದಿದರು.
Gadi Kannadiga > State > ಸಂವಿಧಾನ ಪೀಠಿಕೆ ಓದುವುದರ ಮೂಲಕ “ಸಂವಿಧಾನ ದಿನ’’ ಆಚರಣೆ