This is the title of the web page
This is the title of the web page

Please assign a menu to the primary menu location under menu

State

ಜ. ೧೭ ರಂದು ಯಲಬುರ್ಗಾದಲ್ಲಿ ಸಿರಿಧಾನ್ಯಗಳ ಕಾರ್ಯಗಾರ


ಕೊಪ್ಪಳ ಜನವರಿ ೧೬ : ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಮತ್ತು ಕೃಷಿಕ ಸಮಾಜ ಕೊಪ್ಪಳ ಇವರ ಸಹಯೋಗದಲ್ಲಿ ಸಿರಿಧಾನ್ಯಗಳ ಸಂಕ್ರಾಂತಿ ಹಾಗೂ ಸಿರಿಧಾನ್ಯಗಳ ಉತ್ಪಾದಕರು ಮತ್ತು ಮಾರುಕಟ್ಟೆದಾರರ ಕಾರ್ಯಗಾರವನ್ನು ಜನವರಿ ೧೭ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಯಲಬುರ್ಗಾ ನಗರದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಅವರು ಕಾರ್ಯಗಾರದ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಕೃಷಿಕ ಸಮಾಜ ಅಧ್ಯಕ್ಷರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಭಾಗವಹಿಸುವರು.
ಆಹಾರದಲ್ಲಿ ಸಿರಿಧಾನ್ಯಗಳ ಮಹತ್ವ ಕುರಿತು ಸಿರಿಧಾನ್ಯಗಳ ಸಂತ ಮೈಸೂರಿನ ಆಹಾರ ತಜ್ಞರಾದ ಡಾ. ಖಾದರ್ ಅವರು ಉಪನ್ಯಾಸ ನೀಡಲಿದ್ದಾರೆ. ಅದೇ ರೀತಿ ಆಯ್.ಸಿ.ಎ.ಆರ್ ಹೈದರಾಬಾದ್ ವಿಜ್ಞಾನಿಗಳಾದ ಡಾ. ಮಂಜುಪ್ರಕಾಶ್ ಪಾಟೀಲ್ ಅವರು “ಉತ್ಪಾದಕರು ಮತ್ತು ಮಾರುಕಟ್ಟೆದಾರರು” ಎಂಬ ವಿಷಯದ ಕುರಿತು ಸಂವಾದ ನೀಡಲಿದ್ದಾರೆ. ಆದ್ದರಿಂದ ಜಿಲ್ಲೆಯ ರೈತಬಾಂಧವರು ಈ ಸಿರಿಧಾನ್ಯ ಕಾರ್ಯಗಾರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ಟಿ.ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply