ಕೊಪ್ಪಳ ಡಿಸೆಂಬರ್ ೧೫ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ಪಕ್ಷದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಡಿಸೆಂಬರ್ ೧೫ ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದರು.
ಪೂರ್ವ ನಿಗದಿಯಂತೆ, ಬೆಳಗ್ಗೆ ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಹೊರಟು ಕೊಪ್ಪಳ ತಾಲ್ಲೂಕಿನ ಗಿಣಿಗೇರಾ ಏರ್‌ಸ್ಟ್ರಿಪ್ (ಎಂ.ಎಸ್.ಪಿ.ಎಲ್ ವಿಮಾನ ನಿಲ್ದಾಣ)ಗೆ ಆಗಮಿಸಿದರು. ಈ ವೇಳೆ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು. ಬಳಿಕ ಮುಖ್ಯಮಂತ್ರಿಗಳು ಏರ್‌ಸ್ಟ್ರಿಪ್ ಹೊರಗಡೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಲ ಸಂಪನ್ಮೂಲ (ಭಾರಿ ಮತ್ತು ಮದ್ಯಮ ನೀರಾವರಿ) ಸಚಿವರಾದ ಗೋವಿಂದ ಎಂ.ಕಾರಜೋಳ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ, ಸಂಸದರಾದ ಸಂಗಣ್ಣ ಕರಡಿ, ಶಾಸಕರುಗಳಾದ ಪರಣ್ಣ ಈಶ್ವರಪ್ಪ ಮುನವಳ್ಳಿ, ಬಸವರಾಜ ದಢೇಸೂಗೂರು, ಹೇಮಲತಾ ನಾಯಕ ಹಾಗೂ ಶಶೀಲ್ ಜಿ.ನಮೋಶಿ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಹಲವು ಗಣ್ಯರು ಉಪಸ್ಥಿತರಿದ್ದರು.
Gadi Kannadiga > State > ಕೊಪ್ಪಳಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕೊಪ್ಪಳಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ
Suresh15/12/2022
posted on

More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023